For the best experience, open
https://m.samyuktakarnataka.in
on your mobile browser.

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ

04:16 PM Nov 12, 2023 IST | Samyukta Karnataka
ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ

ಕೊಪ್ಪಳ: ಲೋಕಸಭಾ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಅಲ್ಲದೇ ಈಗಿರುವ ಬಳ್ಳಾರಿ ಕ್ಷೇತ್ರದ ಸಂಸದರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಒಂದಾಗಿ ಪಕ್ಷ ಸಂಘಟನೆ ಮಾಡುತ್ತೇವೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಹಲವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಿದ್ದರು. ಆದರೆ, ವಿಜಯೇಂದ್ರಗೆ ಪಕ್ಷದ ನಾಯಕರು ಅವಕಾಶ ನೀಡಿರುವುದು ಸಂತತ ತಂದಿದೆ ಎಂದರು.
ಕಾಂಗ್ರೆಸ್ಸಿನ ಎಲ್ಲ ಗ್ಯಾರಂಟಿ ಯೋಜನೆಗಳು ವಿಫಲವಾಗಿದ್ದು, ಸರ್ಕಾರದ ಬಗ್ಗೆ ಜನರು ನಂಬಿಕೆ ಕಳೆದುಕೊಂಡಿದ್ದರು. ಈ ಕುರಿತು ಕಾಂಗ್ರೆಸ್ ಪಕ್ಷದವರು ಸಾರ್ವಜನಿಕರು, ವಿಪಕ್ಷಗಳ ನಾಯಕರು ಅಭಿವೃದ್ಧಿ ವಿಚಾರ ಮಾತನಾಡಬಾರದು ಎಂದು ಬಿಜೆಪಿಯ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಂದು ಕಾಂಗ್ರೆಸ್ ಶಾಸಕ ರವಿ ಗಾಣಿಗ ಸೇರಿ ಹಲವರು ಹೇಳುತ್ತಿದ್ದು, ಇವರ ಹೇಳಿಕೆಗೆ ಮಹತ್ವ ನೀಡುವ ಅಗತ್ಯ ಇಲ್ಲ. ಈ ಮೂಲಕ ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ ಎಂದರು.