ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಲೋಕಾಯುಕ್ತ ಬಲೆಗೆ ಕೆಎಸ್‌ಆರ್‌ಟಿಸಿ ಜಿಲ್ಲಾ ಅಧಿಕಾರಿ

08:07 PM Feb 06, 2024 IST | Samyukta Karnataka

ಚಿಕ್ಕಮಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕರೊಬ್ಬರನ್ನು ಬೇರೆಡೆಗೆ ವರ್ಗಾವಣೆ ಮಾಡಲು ಲಂಚದ ಬೇಡಿಕೆ ಇಟ್ಟಿದ್ದು, ಹಣ ಪಡೆಯುತ್ತಿದ್ದ ವೇಳೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಜಿಲ್ಲಾ ಅಧಿಕಾರಿ ಬಸವರಾಜ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಚಾಲಕರೊಬ್ಬರು ಚಿಕ್ಕಮಗಳೂರು ವಿಭಾಗದಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಅಧಿಕಾರಿ ಬಸವರಾಜ್ ಅವರಿಗೆ ತಿಳಿಸಿದ್ದರು. ವರ್ಗಾವಣೆ ಮಾಡಬೇಕಾದರೆ ೧೦ ಸಾವಿರ ಹಣ ನೀಡಬೇಕೆಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಮಂಗಳವಾರ ಬಸವರಾಜ್ ಲಂಚದ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಸವರಾಜ್ ಹಾಗೂ ಅವರ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಬಸವರಾಜ್ ಪ್ರಮುಖ ಆರೋಪಿಯಾಗಿದ್ದು, ಕಾರು ಚಾಲಕ ಎರಡನೇ ಆರೋಪಿಯಾಗಿದ್ದಾನೆ. ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್‌ಸ್ಪೆಕ್ಟರ್ ಅನಿಲ್ ರಾಥೋಡ್ ಸೇರಿದಂತೆ ಇತರೆ ಸಿಬ್ಬಂದಿ ಇದ್ದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಅಧಿಕಾರಿ ಬಸವರಾಜ್ ಮೇಲೆ ಈ ಹಿಂದೆ ಅನೇಕ ಆರೋಪಗಳು ಕೇಳಿ ಬಂದಿದ್ದವು. ನೌಕರರ ವರ್ಗಾವಣೆ ಮಾಡಲು ಮತ್ತು ರಜೆ ನೀಡಲು, ಮಾರ್ಗ ಬದಲಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆಂದು ಸಂಘ-ಸಂಸ್ಥೆಗಳು ಆರೋಪಿಸಿದ್ದರು. ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿದ್ದರು.

Next Article