ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಲೋಕಾಯುಕ್ತ ವರದಿ ಸಾಕ್ಷಿ ಹೇಳುತ್ತಿದೆ…

03:47 PM Nov 16, 2024 IST | Samyukta Karnataka

ಬೆಂಗಳೂರು: ಕಾಂಗ್ರೆಸ್‌ ಕಟ್ಟುಕಥೆ ಕಟ್ಟುವಲ್ಲಿ ತಾನು ನಿಸ್ಸೀಮ ಎಂಬುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮಾನ್ಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ 40% ಕಮಿಷನ್ ಎಂಬ ಸುಳ್ಳು ಅಪಪ್ರಚಾರ ನಡೆಸಿದ್ದ ಕಾಂಗ್ರೆಸ್ ಪಕ್ಷದ ಆರೋಪ ಆಧಾರರಹಿತ ಹಾಗೂ ಹಸೀ ಸುಳ್ಳು ಎಂಬುದು ಇದೀಗ ಲೋಕಾಯುಕ್ತ ತನಿಖೆಯಲ್ಲೇ ಬಹಿರಂಗವಾಗಿದೆ. ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ತಾನು ಹೇಳುವುದೆಲ್ಲಾ ಸುಳ್ಳು, ಕಟ್ಟುಕಥೆ ಕಟ್ಟುವಲ್ಲಿ ತಾನು ನಿಸ್ಸೀಮ ಎಂಬುದು ಸಾಬೀತಾಗಿದೆ.
ನೈತಿಕ ಮಾರ್ಗದಲ್ಲಿ ಎಂದೂ ಅಧಿಕಾರ ಹಿಡಿಯದ ಕಾಂಗ್ರೆಸ್ಸಿಗರು ದುರ್ಮಾರ್ಗ, ಅನೀತಿ, ಅಪಪ್ರಚಾರ ಹಾಗೂ ಸಮಾಜ ಒಡೆಯುವ ಕೆಲಸಗಳಿಂದಲೇ ಅಧಿಕಾರ ಕಬಳಿಸಿದ್ದಾರೆ ಎಂಬುದಕ್ಕೆ ಪ್ರಸ್ತುತ ಬಹಿರಂಗವಾಗಿರುವ ಲೋಕಾಯುಕ್ತ ವರದಿ ಸಾಕ್ಷಿ ಹೇಳುತ್ತಿದೆ. ಕರ್ನಾಟಕದ ಜನತೆಯನ್ನು ವಂಚಿಸಿ, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಅಧಿಕಾರದಿಂದ ಕೆಳಗಿಳಿದು ಕರ್ನಾಟಕದ ಜನತೆಯ ಕ್ಷಮೆ ಕೋರಲಿ ಎಂದು ಒತ್ತಾಯಿಸುತ್ತೇನೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವಾಗಲೇ ಲೋಕಾಯುಕ್ತ ತನಿಖಾ ವರದಿ ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಕಾಂಗ್ರೆಸ್ಸಿಗರು ಇನ್ನೇನೂ ಸಮಜಾಯಿಸಿ ನೀಡುವುದಕ್ಕಾಗಲಿ, ವಿತಂಡವಾದ ಮಾಡುವುದಕ್ಕಾಗಲಿ ಅವಕಾಶವೇ ಇಲ್ಲ. ಸದ್ಯ ಬಾಕಿ ಬಿಲ್ ಪಾವತಿಯಾಗದೇ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಗುತ್ತಿಗೆದಾರರು ರಾಜ್ಯದಲ್ಲಿರುವುದು 40% ಅಲ್ಲ 80% ಕಾಂಗ್ರೆಸ್ ಸರ್ಕಾರ ಎಂಬ ಅಸಲಿ ಸತ್ಯವನ್ನು ಬಹಿರಂಗ ಪಡಿಸುತ್ತಿದ್ದಾರೆ. ಒಂದರ ಮೇಲೊಂದು ಹಗರಣಗಳ ತನಿಖೆಯ ಕಾನೂನಿನ ಉರುಳು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಸುತ್ತಿಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ಮಾರಾಟವಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳೇ ಅಧಿಕೃತ ಹೇಳಿಕೆ ನೀಡಿ ಕರ್ನಾಟಕದ ಗೌರವವನ್ನು ಹರಾಜು ಹಾಕುತ್ತಿದ್ದಾರೆ. ಜನಪರ ಹಾಗೂ ಅಭಿವೃದ್ಧಿಪರ ಆಡಳಿತ ನೀಡುತ್ತಿದ್ದ ಮಾನ್ಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದವರಿಗೆ ಜನರೇ ತಕ್ಕ ಶಾಸ್ತಿ ಮಾಡಲಿದ್ದಾರೆ. ಆದರೆ ಇದೀಗ ತಮ್ಮ ಕರಾಳತೆಯ ಭ್ರಷ್ಟ ಮುಖವನ್ನು ಮುಚ್ಚಿಕೊಳ್ಳಲು ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ ಎಂಬ ಮಧ್ಯಂತರ ವರದಿಯನ್ನು ತರಾತುರಿಯಲ್ಲಿ ತರಿಸಿಕೊಂಡು #SIT ರಚಿಸಲು ಹೊರಟಿದ್ದೀರಿ ಈ ತನಿಖೆಯಿಂದಲೂ ನಿಮಗೆ ಮುಖಭಂಗವೇ ಕಟ್ಟಿಟ್ಟ ಬುತ್ತಿಯಾಗಲಿದೆ ಎಂದಿದ್ದಾರೆ.

Tags :
#ಕಾಂಗ್ರೆಸ್‌#ಬಿಜೆಪಿ#ಲೋಕಾಯುಕ್ತ#ವಿಜಯೇಂದ್ರ#ಸಿದ್ದರಾಮಯ್ಯ
Next Article