ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ

07:12 PM Aug 01, 2024 IST | Samyukta Karnataka

ವಯನಾಡು ಸಂಕಷ್ಟಕ್ಕೆ ಸ್ಪಂದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಭೂಕುಸಿತದ ದುರಂತದ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ. ವಯನಾಡ್​ ಸಂತ್ರಸ್ತರ ಭೇಟಿ ಬಳಿಕ ಭಾವುಕರಾಗಿ ಮಾತನಾಡಿರುವ ಅವರು ಇದು ವಯನಾಡು, ಕೇರಳ ಮತ್ತು ಇಡೀ ದೇಶದಲ್ಲೇ ಅತ್ಯಂತ ಭೀಕರ ದುರಂತ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿದ್ದೇವೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಹಲವರು ತಮ್ಮ ಮನೆಗಳನ್ನು ಕಳೆದುಕೊಂಡು ಸಂಕಟಪಡುತ್ತಿರುವ ದೃಶ್ಯಗಳು ಅತ್ಯಂತ ಕರುಣಾಜನಕವಾಗಿವೆ. ಸಂತ್ರಸ್ತರಿಗೆ ಅಗತ್ಯ ಸಹಾಯ ಮಾಡುವ ಎಲ್ಲ ಪ್ರಯತ್ನ ಮಾಡುತ್ತೇವೆ, ಬದುಕುಳಿದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಇಲ್ಲಿಯ ಸರ್ಕಾರ ಕ್ರಮಕೈಗೊಳ್ಳುವ ಭರವಸೆ ಇದೆ. ಇನ್ನೂ ಬಹಳಷ್ಟು ಕೆಲಸಗಳು ಆಗಬೇಕಿವೆ. ಭೂ ಕುಸಿತದಂತಹ ಸಂದರ್ಭದಲ್ಲಿ ವಾಯನಾಡಿನ ಜನರು ಹಾಗೂ ಪ್ರಾಣಿಗಳ ಜೀವ ರಕ್ಷಣೆ ಹಾಗೂ ಬದುಕುಳಿದವರ ಆರೈಕೆ ಮಾಡಿದ ವೈದ್ಯರು, ನರ್ಸ್‌ಗಳು, ಆಡಳಿತ ವರ್ಗ ಮತ್ತು ಸ್ವಯಂಸೇವಕರು ಸೇರಿದಂತೆ ಸಂಕಷ್ಟಕ್ಕೆ ಸ್ಪಂದಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದಿದ್ದಾರೆ.

Next Article