ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದು

07:10 PM Jan 27, 2024 IST | Samyukta Karnataka

ಬೆಂಗಳೂರು: ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರೋಹನ್‌ ಬೋಪಣ್ಣ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿರುವುದು ವಿಶೇಷ.
ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದೆಂಬ ಮಾತು ಇವರ ಆಟ ನೋಡಿದವರಿಗೆ ಅನ್ನಿಸದೆ ಇರಲಾರದು. ಇಂತಹ ಇನ್ನಷ್ಟು ದಾಖಲೆಗಳು ರೋಹನ್ ಬೋಪಣ್ಣನವರಿಂದ ಮೂಡಿಬರಲೆಂದು ಆಶಿಸುತ್ತೇನೆ ಎಂದಿದ್ದಾರೆ.

Next Article