ವಸತಿ ಶಾಲೆ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ಇಬ್ಬರ ಅಮಾನತು
08:06 PM Jul 08, 2024 IST | Samyukta Karnataka
ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಮಾಧ್ಯಮಗಳ ವರದಿ ಬೆನ್ನಲ್ಲೇ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದೆ.
ಶಾಲೆಯ ಪ್ರಾಂಶುಪಾಲರು ಮತ್ತು ವಸತಿ ಶಾಲೆಯ ವಾರ್ಡನ್ ಅವರನ್ನು ಅಮಾನತು ಮಾಡಲಾಗಿದೆ. ರೇವಣಸಿದ್ದಪ್ಪ & ಸುನೀತಾ ಇಬ್ಬರಿಗೆ ಅಮಾನತುಗೊಳಿಸಿ ವಸತಿ ಶಾಲೆ ಕಾರ್ಯನಿರ್ವಾಹಕ ನಿರ್ದೇಶಕಿ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪದಡಿ ಅಮಾನತುಗೊಳಿಸಿ ಲತಾ ಕುಮಾರಿ ಆದೇಶ ನೀಡಿದ್ದು, ವಸತಿ ಶಾಲೆಗೆ ಅನಧಿಕೃತವಾಗಿ ಗೈರು ಹಾಜರಿ ಆಗುವ ಬಗ್ಗೆ ಆದೇಶದಲ್ಲಿ ಉಲ್ಲೇಖಿಸಿದ್ದು, ಶುಚಿ ಆಹಾರ & ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ವಿಫಲ ಕುರಿತಂತೆ ಇಲಾಖೆಯ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜುಲೈ 05 ರಂದು ರಾಜಲಬಂಡ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿತ್ತು.