ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ
11:02 AM Apr 01, 2024 IST | Samyukta Karnataka
ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ಇಳಿಕೆಯಾಗಿದೆ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್‌ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ 30.50 ರೂ. ಇಳಿಕೆಯಾಗಿದ್ದು, ಇನ್ನು 5ಕೆಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಹೊಸ ಆರ್ಥಿಕ ವರ್ಷದ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದೊಡ್ಡ ಪರಿಹಾರವನ್ನು ನೀಡಿದ್ದು, ವಾಣಿಜ್ಯ ಸಿಲಿಂಡರ್ ಮತ್ತು 5ಕೆಜಿ ಎಫ್‌ಟಿಎಲ್ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಗಳಲ್ಲಿ ಕಡಿತವನ್ನು ಘೋಷಿಸಿವೆ.