For the best experience, open
https://m.samyuktakarnataka.in
on your mobile browser.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ಎಸ್‌ಐಟಿಗೆ

07:18 PM May 31, 2024 IST | Samyukta Karnataka
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ಎಸ್‌ಐಟಿಗೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಪರಿಗಣಿಸಿ, ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ ರಚಿಸಿ, ಅದರ ಮೂಲಕ ತನಿಖೆ ನಡೆಸಲು ನಮ್ಮ ಸರ್ಕಾರವು ನಿರ್ಧರಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕರಾದ ಚಂದ್ರಶೇಖರ್ ಪಿ ರವರು ಅಪರಾಹ್ನ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅನುದಾನ ಹಣವು ದುರುಪಯೋಗವಾಗಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು, ದಿನಾಂಕ: 26.05.2024 ರಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮೃತರ ಪ್ರಯ ನೀಡಿದ ದೂರಿನ ಮೇರಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿರುತ್ತದೆ.
ಮೇಲೆ ಓದಲಾದ (2)ರಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಮುಖ್ಯ ನಿಬಂಧಕರಾದ ಶ್ರೀ ಎ. ರಾಜಶೇಖರ್ ರವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ನಗರದ ಹೈಂಡ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ರಮ ದಾಖಲಾಗಿರುತ್ತದೆ.
ಈ ಮೇಲ್ಕಂಡ ಪ್ರಕರಣಗಳನ್ನು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಸರ್ಕಾರವು ಪರಿಗಣಿಸಿ ಈ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದಿದ್ದಾರೆ.