ವಿಕಸಿತ ಕಾಶ್ಮೀರ" ನಿರ್ಮಾಣಕ್ಕೆ ಬಿಜೆಪಿ ಸಂಕಲ್ಪ
ನವದೆಹಲಿ: ವಿಕಸಿತ ಭಾರತ ರೀತಿ "ವಿಕಸಿತ ಕಾಶ್ಮೀರ" ನಿರ್ಮಾಣಕ್ಕೂ ಬಿಜೆಪಿ ಸಂಕಲ್ಪ ತೊಟ್ಟಿದ್ದು, ಪ್ರತಿಪಕ್ಷ ಸ್ಥಾನದಲ್ಲಿದ್ದೂ ಇದನ್ನು ಸಾಕಾರಗೊಳಿಸಲಿದೆ ಎಂದು ಕೇಂದ್ರ ಆಹಾರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಮ್ಮು-ಕಾಶ್ಮೀರ ವಿಧಾನಸಭೆ ವಿಪಕ್ಷ ನಾಯಕರನ್ನಾಗಿ ಸುನಿಲ್ ಶರ್ಮಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಕಣಿವೆ ರಾಜ್ಯದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶ್ರಮಿಸಲಾಗುವುದು ಎಂದು ಹೇಳಿದರು.
ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.
ಕಾಶ್ಮೀರದ ಉತ್ತಮ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಶ್ರಮಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ನೂತನ ವಿಪಕ್ಷ ನಾಯಕ ಸುನಿಲ್ ಶರ್ಮಾ ಅವರೂ ಕಾರ್ಯೋನ್ಮುಖರಾಗಲಿದ್ದಾರೆ ಆಶಾ ಭಾವನೆ ವ್ಯಕ್ತಪಡಿಸಿದರು.
ಸುನಿಲ್ ಶರ್ಮಾ ಅವರು ಕಣಿವೆ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸಲಿದ್ದಾರೆ. ಜತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಜತೆ ನಿಲ್ಲುತ್ತಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಅಲ್ಲಿನ ಜನತೆಗೆ ಭರವಸೆ ನೀಡಿದರು.