ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿಘ್ನ ನಿವಾರಕ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ

02:44 PM Dec 03, 2024 IST | Samyukta Karnataka

ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧ

ಬೆಂಗಳೂರು: ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಕಲಚೇತನರು ದೇವರ ಮಕ್ಕಳು. ಅವರಿಗೆ ಮನೋಬಲವೇ ಶಕ್ತಿ. ಅಂಗ ವೈಕಲ್ಯವನ್ನು ಮೆಟ್ಟಿ ನಿಂತು ಅವರು ಅನೇಕ ಸಾಧನೆಗಳನ್ನು ಮಾಡಿರುವ ಉದಾಹರಣೆಗಳು ನಮ್ಮ ಮುಂದಿವೆ. ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ಇದಲ್ಲದೆ ಪ್ಯಾರಾ ಒಲಿಂಪಿಕ್ಸ್‌'ನಲ್ಲಿ ವಿಕಲಚೇತನರು ಹೆಚ್ಚು ಪದಕಗಳನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ. ಹಾಗಾಗಿ ಅವರಲ್ಲಿ ಆತ್ಮಬಲ ಹೆಚ್ಚಿದೆ. ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Tags :
#ಡಿಕೆಶಿವಕುಮಾರ#ಬೆಂಗಳೂರು
Next Article