For the best experience, open
https://m.samyuktakarnataka.in
on your mobile browser.

ವಿಜಯೇಂದ್ರ‌ಗೆ ಒಳಿದ ರಾಜ್ಯಾಧ್ಯಕ್ಷ ಪಟ್ಟ

07:01 PM Nov 10, 2023 IST | Samyukta Karnataka
ವಿಜಯೇಂದ್ರ‌ಗೆ ಒಳಿದ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು: ರಾಜ್ಯ ಬಿಜೆಪಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.