ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿಜಯೇಂದ್ರ ವ್ಯಕ್ತಿಯಲ್ಲ ಪಕ್ಷದ ಶಕ್ತಿ…

03:48 PM Dec 05, 2024 IST | Samyukta Karnataka

ಕಲಬುರಗಿ: ಕಾಂಗ್ರೆಸ್ ಸರ್ಕಾರ ರೈತರ, ಬಡವರ ಹಾಗೂ ಮಠಮಾನ್ಯಗಳ ಜಮೀನು ಕಬಳಿಸುವ ಹುನ್ನಾರ ನಡೆಸಿದ್ದು, ಕರ್ನಾಟಕ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ವಾಸ್ತವ ಸ್ಥಿತಿಯನ್ನು ಪಕ್ಷದ ಹೈಕಮಾಂಡ್ ಗೆ ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ಮಾಜಿ ಸಚಿವ ರೇಣುಕಾಚಾರ್ಯ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನೂರಕ್ಕೆ ನೂರರಷ್ಟು ದೆಹಲಿಗೆ ಹೋಗುತ್ತೇವೆ ಕಾದು ನೋಡಿ. ಈಗಲೇ ಎಲ್ಲವನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನೀತಿಗಳ ವಿರುದ್ಧ ಒಂದಾಗಿ ಹೋರಾಟ ಮಾಡಿ ಪಕ್ಷದ ಜೊತೆ ಇರಬೇಕಾದವರು, ಅವರದ್ದೇ ತಂಡ ಮಾಡಿಕೊಳ್ಳುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಹೇಳಿದರು.

ನಾಲ್ಕು ದಶಕಕ್ಕೂ ಅಧಿಕ ಸೈಕಲ್ ತುಳಿಯುವ ಮೂಲಕ ಪಕ್ಷವನ್ನು ಕಟ್ಟಿ ಬೆಳೆಸಿರುವ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಮಾತನಾಡುವುದು ಸರಿಯಲ್ಲ. ನಾವು ಯಾರ ವಿರುದ್ಧ ಹೋರಾಟ ಮಾಡಬೇಕು ಎಂಬುದನ್ನು ಅರಿತುಕೊಳ್ಳಬೇಕು. ಮಾತೆತ್ತಿದ್ದರೆ ಹಿಂದುತ್ವದ ಬಗ್ಗೆ ಮಾತನಾಡುವವರು ತಾವು ಯಾವ ಪಕ್ಷದಲ್ಲಿ ಇದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ರಾಜ್ಯಾದ್ಯಂತ ಪ್ರವಾಸ ಮಾಡಿ, ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಹೋಗುತ್ತಿರುವ ವಿಜಯೇಂದ್ರ ಅವರು ವ್ಯಕ್ತಿಯಲ್ಲ. ಬದಲಾಗಿ ಪಕ್ಷದ ದೊಡ್ಡ ಶಕ್ತಿಯಾಗಿದ್ದಾರೆ. ಹೀಗಾಗಿ ನಾವೆಲ್ಲರೂ ಒಟ್ಟಾಗಿ ಹೋಗಬೇಕಾದರೆ ನಿಮ್ಮ ನಡುವಳಿಕೆಗಳನ್ನು ಬದಲಾ ಮಾಡಿಕೊಳ್ಳಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂ,ಗೆ ಪರೋಕ್ಷವಾಗಿ ತಿಳಿಸಿದರು.

Tags :
#ಕಲಬುರಗಿ#ವಕ್ಫ್‌
Next Article