For the best experience, open
https://m.samyuktakarnataka.in
on your mobile browser.

ವಿಧಾನ ಪರಿಷತ್ ಸ್ಥಾನದಿಂದ ನಾರಾಯಣ ಸ್ವಾಮಿ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಮನವಿ

04:28 PM Sep 03, 2024 IST | Samyukta Karnataka
ವಿಧಾನ ಪರಿಷತ್ ಸ್ಥಾನದಿಂದ ನಾರಾಯಣ ಸ್ವಾಮಿ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಛಲವಾದಿ ನಾರಾಯಣಸ್ವಾಮಿ ಅವರ ಎಂಎಎಲ್‌ಸಿ ಸ್ಥಾನ ರದ್ದುಪಡಿಸುವಂತೆ ಮನವಿ ಮಾಡಿ ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಎಂಎಲ್‌ಸಿ ಮಂಜುನಾಥ ಭಂಡಾರಿ, ವಸಂತ್ ಕುಮಾರ್ ಅವರ ನೇತೃತ್ವದ ನಿಯೋಗ ಮಂಗಳವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದೆ.
ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದಿಂದ ಪಡೆದುಕೊಂಡ ನಿವೇಶನವನ್ನು ದುರುಪಯೋಗಪಡಿಸಿಕೊಂಡಿದ್ದು, ಶಿಕ್ಷಣ ಉದ್ದೇಶಕ್ಕಾಗಿ ಪಡೆದುಕೊಂಡು ಹೌಸಿಂಗ್‌ ಬೋರ್ಡ್‌ನಲ್ಲಿರುವ ಸಿ.ಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌ ನಡೆಸಲು ಬಾಡಿಗೆ ಕೊಡಲಾಗಿದೆ ಹೌಸಿಂಗ್ ಬೋರ್ಡ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಛಲವಾದಿ ನಾರಾಯಣ ಸ್ವಾಮಿ ಅವರು ಕೆಐಎಡಿಬಿಯಿಂದ ಸಿಎ ಸೈಟ್ ಪಡೆದುಕೊಂಡಿದ್ದರು. ಅದೇ ಸಂದರ್ಭದಲ್ಲಿ ಅವರು ಆದರ್ಶ ಸ್ಕೂಲ್ ಎಜುಕೇಶನ್ ಗ್ರೂಪ್‌ನ ಸಂಚಾಲಕರೂ ಆಗಿದ್ದರು. ಶಿಕ್ಷಣ ಸಂಸ್ಥೆ ನಡೆಸಲು ಪಡೆದುಕೊಂಡ ಸೈಟ್‌ನಲ್ಲಿ ಇದೀಗ ‘ಆನಂದ್ ಧಂ ಬಿರಿಯಾನಿ ಹೋಟೆಲ್‌’ ನಡೆಯುತ್ತಿದೆ ಶಿಕ್ಷಣ ಉದ್ದೇಶಕ್ಕೆ ಪಡೆದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬುವುದು ನಿಯಮವಾಗಿದೆ. ಆದರೆ, ಶಿಕ್ಷಣ ಉದ್ದೇಶಕ್ಕಾಗಿ ಪಡೆದಿರುವ ಸಿಎ ಸೈಟ್ ನಲ್ಲಿ ಧಂ ಬಿರಿಯಾನಿ ಹೊಟೇಲ್ ನಡೆಸುತ್ತಿದ್ದಾರೆ. ರಾಜ್ಯಪಾಲರಿಗೆ ಇದನ್ನು ವಿವರವಾಗಿ ತಿಳಿಸಿದ್ದೇವೆ. ಈ ಕೂಡಲೇ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯನ್ನು ವಜಾ ಮಾಡಬೇಕು ಎಂದು ಸಲೀಂ ಅಹ್ಮದ್ ನಿಯೋಗ ಆರೋಪಿಸಿದೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವಸಂತ ಕುಮಾರ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ವಿಧಾನ ಪರಿಷತ್ತಿನ ಸದಸ್ಯ ಪುಟ್ಟಣ್ಣ, ರವಿ, ಸುದಾಮ್ ದಾಸ್, ದಿನೇಶ್ ಗೂಳಿಗೌಡ, ಜಗದೇವ್ ಗುತ್ತೆದಾರ್, ತಿಪ್ಪಣ್ಣ ಕಮಕನೂರು, ಬಲ್ಕಿಸ್ ಬಾನು, ಕೆಪಿಸಿಸಿ ಉಪಾಧ್ಯಕ್ಷ ಎಂ. ನಾರಾಯಣ ಸ್ವಾಮಿ, ಶರಣಪ್ಪ ಮಟ್ಟೂರ, ಕೆಪಿಸಿಸಿ ಎಸ್‌ಸಿ ವಿಭಾಗದ ಅಧ್ಯಕ್ಷ ಧರ್ಮಸೇನ ಅವರು ನಿಯೋಗದಲ್ಲಿದ್ದರು.

Tags :