ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ..!
ಬೆಳಗಾವಿ: ಇಲ್ಲಿನ ಸಾಂಬ್ರಾದಲ್ಲಿನ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕ ಸೃಷ್ಟಿಸಿತ್ತು, ಆದರೆ ತಪಾಸಣೆ ನಂತರ ಅದು ಹುಸಿ ಬಾಂಬ್ ಕರೆ ಎಂದು ಪೊಲೀಸರು ಹೇಳಿದಾಗ ನಿಟ್ಟುಸಿರು ಬಿಡಲಾಯಿತು.
ವಿಮಾನ ನಿಲ್ದಾಣದ ಸ್ಫೋಟಿಸುವ ಬೆದರಿಕೆ ಹಾಕಿರುವ ಅಪರಿಚಿತರು, ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇ-ಮೇಲ್‌ಗೆ ಬೆದರಿಕೆ ಪತ್ರ ಕಳುಹಿಸಿದ್ದರು.
ಚೆನ್ನೈನಿಂದ ಇ-ಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.
ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಯಿತು. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ತ್ಯಾಗರಾಜ ಅವರು ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಜಗದೀಶ ರೋಹನ, ಬೆದರಿಕೆ ಹಿನ್ನಲೆಯಲ್ಲಿ ಇಡೀ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು. ಇದೊಂದು ಹುಸಿ ಇ-ಮೇಲ್ ಕರೆ ಇರಬಹುದು. ಆದರೂ ಕೂಡ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.