For the best experience, open
https://m.samyuktakarnataka.in
on your mobile browser.

ವಿಶ್ವದ ನಂ.1 ಚೆಸ್​ ಚುತುರನನ್ನ ಮಣಿಸಿದ ಭಾರತದ ಗ್ರ್ಯಾಂಡ್‌ಮಾಸ್ಟರ್‌ ಪ್ರಜ್ಞಾನಂದ

05:41 PM May 30, 2024 IST | Samyukta Karnataka
ವಿಶ್ವದ ನಂ 1 ಚೆಸ್​ ಚುತುರನನ್ನ ಮಣಿಸಿದ ಭಾರತದ ಗ್ರ್ಯಾಂಡ್‌ಮಾಸ್ಟರ್‌ ಪ್ರಜ್ಞಾನಂದ

ಓಸ್ಲೋ: ವಿಶ್ವದ ನಂ.1 ಚೆಸ್‌ ಮಾಸ್ಟರ್‌ ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್‌ಗೆ ಭಾರತದ ಚೆಸ್ಟ್‌ ಗ್ರ್ಯಾಂಡ್‌ ಮಾಸ್ಟರ್‌ ಖ್ಯಾತಿಯ ಆರ್‌. ಪ್ರಜ್ಞಾನಂದ ಸೋಲುಣಿಸಿದ್ದಾರೆ.
ಬುಧವಾರ ತಡರಾತ್ರಿ ನಡೆದ ನಾರ್ವೆ ಚೆಸ್ ಟೂರ್ನಿಯ 3ನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ. ಇದು 6 ಬಾರಿ ವಿಶ್ವ ಚೆಸ್‌ ಚಾಂಪಿಯನ್‌ ಕಾರ್ಲ್‌ಸನ್‌ ವಿರುದ್ಧ ಪ್ರಜ್ಞಾನಂದಗೆ ಒಲಿದ ಮೊದಲ ಗೆಲುವು ಸಹ ಆಗಿದೆ. ಮೂರು ಸುತ್ತಿನ ಬಳಿಕ ಅಂಕಪಟ್ಟಿಯಲ್ಲಿ ಪ್ರಜ್ಞಾನಂದ ಅವರು 5.5 ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಕಾರ್ಲ್‌ಸನ್‌ 3 ಪಾಯಿಂಟ್‌ಗಳೊಂದಿಗೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ.