ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಕನ್ನಡತಿಗೆ ಕಿರೀಟ
ಬೆಂಗಳೂರು: ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.
ಅಮೆರಿಕದಲ್ಲಿ ನಡೆದ ಮಿಸ್ ಯೂನಿವರ್ಸಲ್ ಪೆಟೀಟ್ ಎನ್ನುವ ಸೌಂದರ್ಯ ಸ್ಪರ್ಧೆಯಲ್ಲಿ ಶ್ರುತಿ 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಮಿಸ್ ಯೂನಿವರ್ಸಲ್ ಪೆಟೀಟ್ ಟೈಟಲ್ ಗೆದ್ದ ಮೊದಲ ಭಾರತೀಯ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಈ ಬಾರಿಯ ಸ್ಪರ್ಧೆ ಅಮೆರಿಕದ ಫ್ಲೋರಿಡಾದಲ್ಲಿ ಜೂ. 6ರಿಂದ 10ರವರೆಗೆ ಆಯೋಜಿಸಲಾಗಿತ್ತು. ನ್ಯಾಷನಲ್ ಕಾಸ್ಟ್ಯೂಮ್ ರೌಂಡ್, ಪ್ರಶ್ನೋತ್ತರ ರೌಂಡ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ ಶಿರಸಿ ತಾಲೂಕಿನ ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಶ್ರುತಿ ಸದ್ಯ ತಮ್ಮ ಪಾಲಕರಾದ ಕೃಷ್ಣ ಹೆಗಡೆ, ಕಮಲಾ ಅವರೊಂದಿಗೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಈ ಸ್ಪರ್ಧೆಯನ್ನು ಸುಮಾರು 15 ವರ್ಷಗಳಿಂದ ಅಮೆರಿಕದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಮೊದಲ ಬಾರಿಗೆ 2009ರಲ್ಲಿ ಈ ಸ್ಪರ್ಧೆ ನಡೆದಿತ್ತು. 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ಕೀರೀಟ ತೊಟ್ಟುಕೊಂಡಿದ್ದ ಶ್ರುತಿ ಕಳೆದ ವರ್ಷ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು.