ವ್ಯಕ್ತಿ ಪೂಜೆ ಆದರೂ ಮಾಡಿ, ಪಕ್ಷ ಪೂಜೆ ಆದರೂ ಮಾಡಿ…
ಅಭಿವೃದ್ಧಿಯ royalty ಕೊಟ್ಟು ಕನ್ನಡಿಗರ ಋಣ ತೀರಿಸಿ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ loyal ಆಗಿ ಮತ ನೀಡಿ ಅಧಿಕಾರ ಕೊಟ್ಟಿರುವ ಕರ್ನಾಟಕದ ಮಾತಾದರರಿಗೆ ಅಭಿವೃದ್ಧಿಯ royalty ಕೊಟ್ಟು ಕನ್ನಡಿಗರ ಋಣ ತೀರಿಸಿ ಎಂದು ವಿರೋಧ ಪಕ್ಷದ ನಾಯಕ ಹೇಳಿದ್ದಾರೆ,
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಡಿ ಕೆ ಶಿವಕುಮಾರ ಅವರ ಜನಕಲ್ಯಾಣ ಸಮಾವೇಶ ಆಯ್ತು! ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ಅದೇನು 'ಒಪ್ಪಂದ' ಆಗಿದೆಯೋ, ಆ 'ಒಪ್ಪಂದ' ಕಾರ್ಯಗತ ಆಗೋಲ್ಲ ಅನ್ನೋ ಅನುಮಾನ ಡಿ.ಕೆ.ಶಿವಕುಮಾರ್ ಅವರಿಗೆ ಯಾಕೆ ಕಾಡುತ್ತಿದೆಯೋ ಗೊತ್ತಿಲ್ಲ, ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ದೊಡ್ಡ ರಾಜಕೀಯ ಸ್ಫೋಟವಾಗುವ ಎಲ್ಲ ಲಕ್ಷಣಗಳಂತೂ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸ್ವಾಮಿ ಡಿ ಕೆ ಶಿವಕುಮಾರ ಅವರೇ, ತಾವು ಚಸ್ ಆದರೂ ಆಡಿ, ಫುಟ್ಬಾಲ್ ಆದರೂ ಆಡಿ, ಆದರೆ ನಿಮ್ಮ ರಾಜಕೀಯ ಮೇಲಾಟದಲ್ಲಿ ಕನ್ನಡಿಗರ ಬದುಕಿನ ಜೊತೆ ಮಾತ್ರ ಚೆಲ್ಲಾಟವಾಡಬೇಡಿ. ತಮ್ಮ loyalty ಗೆ ತಮ್ಮ ಹೈಕಮಾಂಡ್ rotalty ಕೊಡುತ್ತೋ ಬಿಡುತ್ತೋ ಅದು ನಿಮ್ಮ ಪಕ್ಷದ ಆಂತರಿಕ ವಿಚಾರ, ಆದರೆ ಕಾಂಗ್ರೆಸ್ ಪಕ್ಷಕ್ಕೆ loyal ಆಗಿ ಮತ ನೀಡಿ ಅಧಿಕಾರ ಕೊಟ್ಟಿರುವ ಕರ್ನಾಟಕದ ಮಾತಾದರರಿಗೆ ಅಭಿವೃದ್ಧಿಯ royalty ಕೊಟ್ಟು ಕನ್ನಡಿಗರ ಋಣ ತೀರಿಸಿ. ನೀವು ವ್ಯಕ್ತಿ ಪೂಜೆ ಆದರೂ ಮಾಡಿ, ಪಕ್ಷ ಪೂಜೆ ಆದರೂ ಮಾಡಿ, ಆದರೆ ಕರ್ನಾಟಕ ಕಾಂಗ್ರೆಸ್ ಪಕ್ಷವನ್ನು ನಂಬಿ ಅಧಿಕಾರ ಕೊಟ್ಟಿರುವ ಮತದಾರ ಪ್ರಭುಗಳಿಗೆ ದ್ರೋಹ ಬಗೆಯಬೇಡಿ ಎಂದಿದ್ದಾರೆ.