ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ

06:27 PM Sep 09, 2024 IST | Samyukta Karnataka

ಬ್ಯಾಡಗಿ: ಚಿಕಿತ್ಸೆ ಫಲಕಾರಿಯಾಗದೇ ಶಂಕಿತ ಡೆಂಗ್ಯೂ ಜ್ವರಕ್ಕೆ ಪಟ್ಟಣದ ಅಗಸನಹಳ್ಳಿಯ ೬ ವರ್ಷದ ಬಾಲಕಿಯೊಬ್ಬಳು ಆಸ್ಪತ್ರೆಯಲ್ಲಿಯೇ ಶನಿವಾರ ತಡರಾತ್ರಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಮಾಲತೇಶ ಗೂರಣ್ಣನವರ ಎಂಬುವರ ಮಗಳು ಅಪೇಕ್ಷಾ ಪಟ್ಟಣದ ಎಂ.ಡಿ.ಎಚ್. ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕಳೆದೊಂದು ವಾರದಿಂದ ಈಕೆಗೆ ಜ್ವರ ಕಾಣಿಸಿಕೊಂಡಿದೆ. ಆತಂಕಕ್ಕೆ ಒಳಗಾದ ಪೋಷಕರು ಪಟ್ಟಣದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೊದಲು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮೂರ್ನಾಲ್ಕು ದಿನಗಳಾದರೂ ಜ್ವರ ನಿಯಂತ್ರಣಕ್ಕೆ ಬರಲಿಲ್ಲ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಯ ಮಧ್ಯೆಯೂ ಬಾಲಕಿ ಅಪೇಕ್ಷಾ ಸಾವನ್ನಪ್ಪಿದ್ದಾಳೆ.
ಮೊದಲು ಸಾಧಾರಣ ಜ್ವರವೆಂದು ಭಾವಿಸಿದ್ದ ಪಾಲಕರಿಗೆ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯರು ಬಾಲಕಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಜೀವನ್ಮರಣ ಹೋರಾಟ ನಡೆಸಿದ ಬಾಲಕಿ ಅಪೇಕ್ಷಾ ಕೊನೆಗೂ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾಳೆ.

Next Article