For the best experience, open
https://m.samyuktakarnataka.in
on your mobile browser.

ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ

02:12 PM Oct 31, 2024 IST | Samyukta Karnataka
ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ

ಬೆಂಗಳೂರು: 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟಿಸ್‌ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟಿಸ್‌ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ನವೆಂಬರ್ 4ರ ಅವರ ಪ್ರತಿಭಟನೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ಶಿಗ್ಗಾವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.

Tags :