ಶಾಸಕ ಮುನಿರತ್ನ ಅವರನ್ನು ಪಕ್ಷ ಹೊರಹಾಕಲಿ
ಹುಬ್ಬಳ್ಳಿ: ಎಚ್.ಐ.ವಿ ಇಂಜೆಕ್ಷನ್ ಮಾಡಲು ಪ್ರಯತ್ನಿಸಿದ ಆರೋಪದಲ್ಲಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಗಳಾಗಿ ಮುಂದುವರೆಯಲು ಯೋಗ್ಯವಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ, ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುವ ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ. ಆದರೆ ಈ ಯಾವುದಕ್ಕೂ ಆಸ್ಪದ ಕೊಡದೇ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ ಎಂದರು.
ಶಾಸಕ ಮುನಿರತ್ನ ಅವರು ನಾಲಾಯಕ್, ಅಯೋಗ್ಯರು. ನಾವೆಲ್ಲರೂ ತಲೆತಗ್ಗಿಸುವಂತಹ ವಿಚಾರವಾಗಿದೆ. ಪಕ್ಷದವರಿಗೆ ನೈತಿಕತೆ ಇದ್ದರೇ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹರಿಹಾಯ್ದರು.