ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್
11:24 AM Dec 05, 2024 IST
|
Samyukta Karnataka
ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ತಳಿಗೆ ಹಾನಿ ಮಾಡಿದ್ದ. 7 ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಶನಿವಾರ ರಾತ್ರಿ ಸುತ್ತಿಗೆ ಸಮೇತ ಆರೋಪಿ ಬಂದು, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಎಸ್ಕೇಪ್ ಆಗಿದ್ದ. ಸದ್ಯ ಗಿರಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Next Article