For the best experience, open
https://m.samyuktakarnataka.in
on your mobile browser.

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್‌ ನಾಮಪತ್ರ ಸಲ್ಲಿಕೆ

01:35 PM Apr 15, 2024 IST | Samyukta Karnataka
ಶಿವಮೊಗ್ಗ  ಗೀತಾ ಶಿವರಾಜ್‌ಕುಮಾರ್‌ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ಗೀತಾ ಶಿವರಾಜಕುಮಾರ್ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇತರರಿದ್ದರು.