ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಿವಮೊಗ್ಗ ಜನತೆಗೆ ಮತ್ತೊಂದು ಸಿಹಿ ಸುದ್ದಿ!

11:40 AM Feb 02, 2024 IST | Samyukta Karnataka

ಬೆಂಗಳೂರು: ಶಿವಮೊಗ್ಗ ಜನತೆಗೆ ಮತ್ತೊಂದು ಸಿಹಿ ಸುದ್ದಿ! ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ರೈಲ್ವೆ ಇಲಾಖೆಗೆ ನೀಡಿದ ಅನುದಾನದಲ್ಲಿ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಸಂಪರ್ಕ ಆರಂಭಿಸಲು 200 ಕೋಟಿ ರೂಪಾಯಿಯನ್ನು ರೈಲ್ವೆ ಸಚಿವಾಲಯ ಮೀಸಲಿಟ್ಟಿದೆ.
ರಾಜ್ಯದ ವಿವಿಧ ರೈಲ್ವೆ ಯೋಜನೆಗಳಿಗಾಗಿ ಒಟ್ಟು 7,524 ಕೋಟಿ ರು. ಅನುದಾನ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ರವರಿಗೆ ಹೃತ್ಪೂರ್ವಕ ಧನ್ಯವಾದಗಳು. ರಾಜ್ಯದ ರೈಲ್ವೇ ಮೂಲಸೌಲಭ್ಯ ಹಾಗೂ ಸಂಪರ್ಕ ವಿಸ್ತರಣೆಗಾಗಿ 2,286 ಕೋಟಿ ರು., ಡಬ್ಲಿಂಗ್ ಹಾಗೂ ಹೊಸ ಮಾರ್ಗಗಳ ಅನುಷ್ಠಾನಕ್ಕಾಗಿ 1,531 ಕೋಟಿ ರು. ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು 987 ಕೋಟಿ ರು. ಅನುದಾನ ಕಲ್ಪಿಸಲಾಗಿದೆ. ಇದರಿಂದ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಹೆಚ್ಚಿನ ಆರ್ಥಿಕ ಬಲ ಸಿಕ್ಕಂತಾಗಿದೆ ಎಂದು ಬರೆದುಕೊಂಡಿದ್ದಾರೆ.

Next Article