ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಿಶು ಅಪಹರಣ ಪ್ರಕರಣ: ಮರಳಿ ಅಮ್ಮನ ಮಡಿಲು ಸೇರಿದ ಮಗು

08:35 AM Oct 27, 2023 IST | Samyukta Karnataka

ಕೋಲಾರ: 6 ದಿನದ ನವಜಾತ ಶಿಶುವನ್ನು ಜಿಲ್ಲಾಸ್ಪತ್ರೆಯಿಂದ ಅಪಹರಿಸಿರುವ ಘಟನೆ ನಡೆದಿದೆ. ಪ್ರಕರಣ ದಾಖಲಾದ 6 ಗಂಟೆಯಲ್ಲೆ ಮಗು ರಕ್ಷಿಸಿ, ತಾಯಿಗೆ ಪೊಲೀಸರು ಒಪ್ಪಿಸಿದ್ದಾರೆ.
ನಗರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಘಟಕದಲ್ಲಿ 6 ದಿನದ ಗಂಡು ಶಿಶುವನ್ನು ಮೂವರು ಮಹಿಳೆಯರು ಅಪಹರಿಸಿರುವ ಘಟನೆ ಗುರುವಾರ ಸಂಜೆ ವರದಿಯಾಗಿತ್ತು. ಈ ಘಟನೆ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.
ಪ್ರಕರಣ ದಾಖಲಾದ ಕೇವಲ 6 ಗಂಟೆಯಲ್ಲೆ ಮಗುವನ್ನು ರಕ್ಷಿಸಿ, ತಾಯಿಗೆ ಒಪ್ಪಿಸಿದ್ದಾರೆ. ಬಂಧಿತ ಮಹಿಳೆಯನ್ನು ಸ್ವಾತಿ ಎಂದು ಗುರುತಿಸಿದ್ದಾರೆ. ಈ ಮಗುವನ್ನು ತಮಿಳುನಾಡಿಗೆ ರವಾನಿಸಲು ಸ್ವಾತಿ ಪ್ಲಾನ್ ಮಾಡಿಕೊಂಡಿರುವ ವಿಚಾರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Next Article