ಶೀಘ್ರದಲ್ಲಿ 5 ಸಾವಿರ ಶಿಕ್ಷಕರ ನೇಮಕ
03:46 PM Sep 25, 2024 IST
|
Samyukta Karnataka
ಕಲಬುರಗಿ: ರಾಜ್ಯದಲ್ಲಿ ಖಾಲಿ ಇರುವ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಶಿಕ್ಷಕರ ಹುದ್ದೆ ಭರ್ತಿಗೆ ಬಹಳ ಫಾಸ್ಟ್ ಆಗಿ ಪ್ರಕ್ರಿಯೆ ನಡೆದಿದೆ. ಹೈ .ಕ. ಭಾಗದಲ್ಲಿ ಈ ತಿಂಗಳು ಅಥವಾ ಮುಂದಿನ ತಿಂಗಳೊಳಗೆ ಪ್ರಕ್ರಿಯೆ ಆರಂಭವಾಗಲಿದೆ. ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಅನುದಾನಿತ ಶಾಲೆಯಲ್ಲಿ ಶಿಕ್ಷರ ನೇಮಕಾತಿ ಶೀಘ್ರವಾಗಲಿದೆ. ಯಾವುದೇ ಅಕ್ರಮ ನಡೆಯಬಾರದು ಎಂದು ಸ್ವಲ್ಪ ತಡವಾಗಿ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
Next Article