ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶ್ರೀರಂಗಪಟ್ಟಣದಲ್ಲಿ ನಾಳೆಯಿಂದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

04:02 PM Dec 07, 2023 IST | Samyukta Karnataka

ಶ್ರೀರಂಗಪಟ್ಟಣ: ಡಿ. 8ರಿಂದ 10ರ ವರೆಗೆ ಶ್ರೀರಂಗಪಟ್ಟಣದಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ಶ್ರೀರಂಗಪಟ್ಟಣದ ಸ್ಮ್ಯಾಷರ್ಸ್ ಕ್ರಿಕೆಟರ್ಸ್ ವತಿಯಿಂದ ಪಂದ್ಯಾವಳಿಯನ್ನು ಆಯೋಜಿಸಿದ್ದು, ಟೂರ್ನಿಯಲ್ಲಿ ಪಾಂಡವಪುರ, ಮೈಸೂರು, ನಂಜನಗೂಡು, ಮಂಗಳೂರು, ಉಡುಪಿ, ಬೆಂಗಳೂರು, ಚೆನೈ ಸೇರಿದಂತೆ ಪ್ರಮುಖ ತಂಡಗಳು ಭಾಗವಹಿಸಲಿವೆ.
ಪ್ರಥಮ ಬಹುಮಾನ 3 ಲಕ್ಷ ರೂ. ನಗದು ಹಾಗೂ ಅತ್ಯಾಕರ್ಷಕ‌ ಟ್ರೋಫಿ,‌ ದ್ವಿತೀಯ ಬಹುಮಾನ 1.5 ಲಕ್ಷ ರೂ. ನಗದು ಹಾಗೂ ಆಕರ್ಷಕ‌ ಟ್ರೋಫಿಯನ್ನು ವಿಜೇತ ತಂಡಗಳಿಗೆ ನೀಡಲಾಗುತ್ತಿದ್ದು, ಜೊತೆಗೆ ಪ್ರತಿ ಪಂದ್ಯಕ್ಕೂ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಟೂರ್ನಿಗೆ ಆಗಮಿಸುವ ತಂಡಗಳಿಗೆ ಸಮವಸ್ತ್ರ, ಊಟ ಹಾಗೂ ವಸತಿ‌‌ ಸೌಲಭ್ಯ ಕಲ್ಪಿಸಿರುವುದಾಗಿ ಸ್ಮ್ಯಾಷರ್ಸ್ ಕ್ರಿಕೆಟರ್ಸ್ ತಂಡದ ವ್ಯವಸ್ಥಾಪಕರು ಪ್ರಕಟಣೆ ಮೂಲಕ ತಿಳಿಸಿದ್ದು, ಪಂದ್ಯಗಳು ಮೊದಲ ಹಂತದಲ್ಲಿ ಲೀಗ್ ಮಾದರಿಯಲ್ಲಿ ನಂತರದ ಹಂತದಲ್ಲಿ ನಾಕ್‌ಔಟ್ ಮಾದರಿಯಲ್ಲಿ ನಡೆಯಲಿವೆ.
ಪಂದ್ಯಗಳು ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇಗುಲದ ಆವರಣದಲ್ಲಿ ನಡೆಯಲಿದ್ದು, ಹೊನಲು ಬೆಳಕಿನ ಪಂದ್ಯಾವಳಿಗೆ ಆಯೋಜಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಟೂರ್ನಿಯ‌ ಎಲ್ಲಾ ಪಂದ್ಯಗಳನ್ನು Y Sports ಯೂಟೂಬ್ ಮೂಲಕ ನೇರ ಪ್ರಸಾರ ಮಾಡಲಾಗುತ್ತಿದೆ.
ಟೂರ್ನಿಯ ಉದ್ಘಾಟನೆ ಹಾಗೂ ಬಹುಮಾನ ವಿತರಣಾ ಸಮಾರಂಭಕ್ಕೆ ಶಾಸಕ‌ ರಮೇಶ್ ಬಂಡಿಸಿದ್ದೇಗೌಡ, ಮಾಜಿ‌ ಶಾಸಕ‌ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಯುವ ಮುಡ ಇಂಡುವಾಳು ಸಚ್ಚಿದಾನಂದ, ಹಿರಿಯ ಕ್ರೀಡಾಪಟುಗಳಾದ ವೆಂಕಟರಾಮು ಮತ್ತು ಜಯಸಿಂಹ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

Next Article