ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ: ಯುವಕ ವಶಕ್ಕೆ

04:26 PM Sep 18, 2024 IST | Samyukta Karnataka

ಧಾರವಾಡ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ರೈತ ಹುತಾತ್ಮನ ಮೂರ್ತಿ ಭಗ್ನ ಮಾಡಿದ ಘಟನೆ ನಡೆದಿದೆ.
ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆ ಬಳಿಕ ನವಲಗುಂದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಭಗ್ನವಾಗಿರುವ ಮೂರ್ತಿಗಳಿಗೆ ಬಟ್ಟೆ ಸುತ್ತಿರುವ ಪೊಲೀಸರು, ಭಗ್ನ ಮಾಡಿರೋ ಮಾನಸಿಕ ಅಸ್ವಸ್ಥನನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ನರಗುಂದ-ನವಲಗುಂದ ಬಂಡಾಯದ ಗೋಲಿಬಾರ್‌ನಲ್ಲಿ ಹುತಾತ್ಮರಾದ ಬಸಪ್ಪ ಲಕ್ಕುಂಡಿ ಪ್ರತಿಮೆ ಭಗ್ನ ಮಾಡಿದ ಯುವಕ, ಗ್ರಾಮದ ಬಸ್ ನಿಲ್ದಾಣದ ಎದುರಿನ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ಮೂರ್ತಿಯ ಖಡ್ಗಕ್ಕೆ ಭಗ್ನ ಮಾಡಿದ್ದಾನೆ. ಮೂರ್ತಿಯ ಕೆಲ ಭಾಗ ಭಗ್ನ ಮಾಡಿರುವವನು ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿ ಪೊಲೀಸರು ಶಾಂತಿ ಸಭೆನ್ನು ಮಾಡಿ, ಐದು ದಿನಗಳಲ್ಲಿ ರಾಯಣ್ಣನ ಹಾಗೂ ರೈತ ಹುತಾತ್ಮನ ಹೊಸ ಮೂರ್ತಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Tags :
#ಅಪರಾಧ
Next Article