ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು

01:20 AM Jun 30, 2024 IST | Samyukta Karnataka

ಬೆಂಗಳೂರು:ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳು ತಿಳಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.

ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ.

ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ.

Next Article