ಸಂಜಯ ಪಾಟೀಲ ಮನೆ ಎದುರು ಮಹಿಳೆಯರ ಪ್ರತಿಭಟನೆ
10:37 PM Apr 13, 2024 IST | Samyukta Karnataka
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ಶಾಸಕ ಸಂಜಯ ಪಾಟೀಲ್ ನಿವಾಸದ ಬಳಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸುಸಂಸ್ಕೃತ ಪಕ್ಷ, ಮಹಿಳೆಯರಿಗೆ ರಕ್ಷಣೆ ನೀಡುವ ಬಿಜೆಪಿಯಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ್ ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾತನಾಡಿರುವುದು ಖಂಡನೀಯ ಎಂದು ಸಂಜಯ ಪಾಟೀಲ್ ಫೋಟೋಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.