ಸಂಭಾಲ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿಯನ್ನು ತಡೆದ ಪೊಲೀಸ್‌ರು
11:53 AM Dec 04, 2024 IST | Samyukta Karnataka
ಸಂಭಾಲ್‌ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರನ್ನು ಜಿಲ್ಲೆಗೆ ತೆರಳುವ ಮಾರ್ಗದಲ್ಲಿ ಪೊಲೀಸರು ತಡೆದು ನಿಲ್ಲಿಸಿದ್ದಾರೆ.
'ಸಂಭಲ್‌ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಹಾಗಾಗಿ ಸಂಭಲ್‌ಗೆ ರಾಹುಲ್ ಗಾಂಧಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದಿಲ್ಲ. ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿಯಲಾಗಿದೆ' ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.