For the best experience, open
https://m.samyuktakarnataka.in
on your mobile browser.

ಸಂವಿಧಾನ ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ

09:27 PM Jan 20, 2025 IST | Samyukta Karnataka
ಸಂವಿಧಾನ ನಾವು ರಕ್ಷಿಸಿದರೆ  ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ

ಬೆಳಗಾವಿ: ಜನರಲ್ಲಿ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಬೆಳಗಾವಿಯಲ್ಲಿಯೇ ಕಾಂಗ್ರೆಸ್‌ನ ಅಧ್ಯಕ್ಷರಾದರು. ಅಧಿವೇಶ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೀವಾಲ ಅವರೊಂದಿಗೆ  ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು, ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನಾಳೆಯೂ ಸಮಾವೇಶ ಯಶಸ್ವಿಯಾಗಿ ನಡೆಯಲಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ ಇದು ಐತಿಹಾಸಿಕ ಸಮಾವೇಶವಾಗಲಿದೆ.

ಬೆಳಗಾವಿಯಲ್ಲಿ ನಾಳೆ ಒಂದು ಗಂಟೆಗೆ "ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ" ನಡೆಯಲಿದ್ದು, ಈ ಸಮಾವೇಶ ಕಳೆದ ಡಿಸೆಂಬರ್ 27 ರಂದು ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು.

ಕಾಂಗ್ರೆಸ್ ನವರಿಗೆ ಈ ಅಧಿವೇಶನ ನಡೆಸಲು ಹಕ್ಕಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆ ಬಾಲಿಶವಾದುದ್ದು. ಅವರಿಗೆ ಇತಿಹಾಸ ಗೊತ್ತಿಲ್ಲ. ಗೋಲ್ವಾಲ್ಕರ್, ಹಾಗೂ ಸಾವರ್ಕರ್ ಸಂವಿಧಾನ ಜಾರಿಯಾದಾಗ ಏನು ಮಾತನಾಡಿದ್ದರು ಎಂದು ಪ್ರಲ್ಹಾದ್ ಜೋಶಿ ಅವರಿಗೆ ತಿಳಿದಿದೆಯೇ? ಎಂದು ಪ್ರಶ್ನಿಸಿದರು.

Tags :