ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ FIR
11:31 AM Nov 08, 2024 IST | Samyukta Karnataka
ಹಾವೇರಿ: ಸುಳ್ಳು ಮಾಹಿತಿ ಹರಡಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲಾಗಿದೆ.
ಹಾವೇರಿಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಹಾವೇರಿಯ ಸಿಇಎನ್ ಠಾಣೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಾವೇರಿಯ ಹನಗೇರಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆಗೆ ವಕ್ಸ್ ನೋಟಿಸ್ ಕಾರಣ. ವಕ್ಸ್ ನೋಟಿಸ್ ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೇಜಸ್ವಿ ಸೂರ್ಯ ಟ್ವಿಟ್ ಮಾಡಿದ್ದರು. ಆದರೆ ಜಿಲ್ಲಾಡಳಿತ ಹಾಗೂ ಪೊಲೀಸರು ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸುಳ್ಳು ಆರೋಪ ಹಬ್ಬಿಸಿದ್ದಾಗಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಾಗಿದೆ.