For the best experience, open
https://m.samyuktakarnataka.in
on your mobile browser.

ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ?

11:07 AM Aug 24, 2024 IST | Samyukta Karnataka
ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ? ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಅವರನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸುದೀರ್ಘ ಪೋಸ್ಟ್‌ ಮಾಡಿದ್ದು ಅಶೋಕ್‌ರವರೇ, ನೀವು ಸಾರಿಗೆ ಸಚಿವರಾಗಿದ್ದವರು , ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. * 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ? * 2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ ?ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ.

  • ದಿನಾಂಕ: 15/11/2021 ರಲ್ಲಿ ಶ್ರೀ. ಎಂ.ಆರ್ ಶ್ರೀನಿವಾಸಮೂರ್ತಿ ಭಾಆಸೇ( ನಿವೃತ್ತ) ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿ.ಜೆ.ಪಿ ಸರ್ಕಾರ ರಚಿಸಿತ್ತು. ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ ?
  • ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ?
  • ತಮ್ಮದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ?
  • ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು ? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ.

ಶ್ರೀ ಅಶೋಕ್ ರವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ‌‌ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದಿದ್ದಾರೆ.

Tags :