ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಚಿವೆ ಹೆಬ್ಬಾಳಕರಗೆ ಸಮನ್ಸ್ ಜಾರಿ

09:35 PM Mar 28, 2024 IST | Samyukta Karnataka

ಬೆಳಗಾವಿ: ಲೋಕಸಮರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್ ಜಾರಿ ಮಾಡಿದೆ.
ಸಚಿವರು ಇಲ್ಲಿನ ಕುವೆಂಪುನಗರದ ಗೃಹಕಚೇರಿ ಪಕ್ಕದ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಸಭೆಯನ್ನು ಮಾರ್ಚ್ ೨೦ರಂದು ನಡೆಸಿದ್ದರು. ಅದಕ್ಕೆ ಅನುಮತಿ ಪಡೆದಿರಲಿಲ್ಲ. ‘ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಬಿಜೆಪಿ ಆರೋಪಿಸಿತ್ತು.
ಈ ಸಮನ್ಸಗೆ ಬರುವ ‘ಏಪ್ರಿಲ್ ೩೦ರೊಳಗೆ ಉತ್ತರಿಸಬೇಕು’ ಎಂದು ಸೂಚಿಸಲಾಗಿದೆ. ಎರಡನೇ ಆರೋಪಿಯಾಗಿ ಹೆಸರಿಸಿರುವ ಸಭಾಂಗಣದ ಮಾಲಿಕ ಉಮೇಶ ಮಲ್ಲಪ್ಪ ವಾಸಣ್ಣವರ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ.

Next Article