ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಚಿವೆ ಹೆಬ್ಬಾಳಕರ ಕಾರು ಅಪಘಾತ: ತಿಂಗಳು ವಿಶ್ರಾಂತಿಗೆ ವೈದ್ಯರ ಸೂಚನೆ

07:34 PM Jan 14, 2025 IST | Samyukta Karnataka

ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗಿನ ಜಾವ ಸುಮಾರು ೫ ಗಂಟೆ ಸುಮಾರಿಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ.
ಘಟನೆಯಲ್ಲಿ ಸಚಿವೆ ಮಾತ್ರವಲ್ಲದೇ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನ ಮುಂದಿನ ಭಾಗ ನುಜ್ಜುಗುಜ್ಜಾಗಿದೆ.
ಲಕ್ಷ್ಮೀ ಹೆಬ್ಬಾಳ್ಳರ್ ಅವರ ಬೆನ್ನು, ಮುಖಕ್ಕೆ ಗಾಯವಾಗಿದೆ. ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಸಚಿವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ರವಿ ಪಾಟೀಲರು, ಬೆನ್ನು ಮೂಳೆಗೆ ಪೆಟ್ಟು ತಗುಲಿದೆ. ಸಧ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಕನಿಷ್ಟ ಒಂದು ತಿಂಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿ ಅಗತ್ಯ ಎಂದು ಹೇಳಿದರು,

ಆತಂಕ ಬೇಡ..!
ತಾಯಿಯ ಬೆನ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ರಾತ್ರಿ ಸಿಎಲ್‌ಪಿ ಸಭೆ ಮುಗಿಸಿ ಬೆಳಿಗ್ಗೆ ವಿಮಾನದಲ್ಲಿ ಬರಬೇಕಾಗಿತ್ತು. ಆದರೆ, ಇಂದು ಬೆಳಗ್ಗೆ ಕ್ಷೇತ್ರದಲ್ಲಿ ಎರಡ್ಮೂರು ಮುಖ್ಯವಾದ ಕೆಲಸಗಳಿರುವ ಹಿನ್ನೆಲೆಯಲ್ಲಿ ರಸ್ತೆ ಮೂಲಕ ಆಗಮಿಸುತ್ತಿದ್ದರು. ದೇವರು ಮತ್ತು ಜನರ ಆಶೀರ್ವಾದದಿಂದ ದೊಡ್ಡ ಗಾಯಗಳೇನೂ ಆಗಿಲ್ಲ. ಅಭಿಮಾನಿಗಳು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದು ಪುತ್ರ ಮೃನಾಲ್ ತಿಳಿಸಿದ್ದಾರೆ.

ಎಸ್‌ಪಿ ಹೇಳಿಕೆ:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿದ್ದ ಕಾರು ಸರ್ಕಾರದ್ದು, ಸರ್ಕಾರಿ ಚಾಲಕರೇ ಕಾರು ಚಲಾಯಿಸುತ್ತಿದ್ದರು. ಬೆಂಗಾವಲು ಪಡೆ ವಾಹನ ಕ್ಯಾಂಟರ್ ಮುಂದಿತ್ತು. ಅಡ್ಡ ಬಂದ ಯಾವುದೋ ಪ್ರಾಣಿಯ ಜೀವ ಉಳಿಸಲು ಮತ್ತು ಮುಂದಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದ್ದರಿಂದ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಯ ಪಕ್ಕದ ಮರಕ್ಕೆ ಕಾರು ಡಿಕ್ಕಿಯಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಸ್‌ಪಿ ತಿಳಿಸಿದ್ದಾರೆ.

ತಿಂಗಳು ವಿಶ್ರಾಂತಿ…!
ಬೆಳಗ್ಗೆ ೬.೧೫ಕ್ಕೆ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಿಕಿತ್ಸೆಗೆ ದಾಖಲಾಗಿದ್ದು ಅವರ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಎಂಆರ್‌ಐ ಸ್ಕ್ಯಾನ್ ಮಾಡಲಾಗಿದೆ. ಎರಡು ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಲಿದ್ದಾರೆ. ಆದರೆ, ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಲೆಗೆ ಗಾಯವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಗನ್ ಮ್ಯಾನ್ ಮತ್ತು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವೈದ್ಯ ವೈದ್ಯ ರವಿ ಪಾಟೀಲ ಹೇಳಿದ್ದಾರೆ.

Tags :
accidentbalagaviDoctorlaxmi hebbalkar
Next Article