ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಚಿವೆ ಹೆಬ್ಬಾಳ್ಕರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ

04:14 PM Nov 05, 2024 IST | Samyukta Karnataka

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಕಿರುಕುಳಕ್ಕೆ ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕ ಸೋಮು ಅವರ ನಿರಂತರ ಮಾನಸಿಕ ಕಿರುಕುಳ ನೀಡಿ ಹಿಂಸೆ ನೀಡಿದ ಪರಿಣಾಮ ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸರ್ಕಾರದಲ್ಲಿ ಇದು ಮೊದಲನೇ ಆತ್ಮಹತ್ಯೆ ಏನಲ್ಲ. ವಾಲ್ಮೀಕಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರನ್ ಅವರೂ ಸಹ ಸಚಿವ ನಾಗೇಂದ್ರ ಅವರ ಮಾನಸಿಕ ಹಿಂಸೆ ತಾಳಲಾಗದೆ ಆತ್ಮಹತ್ಯೆಗೆ ಶರಣಾಗಿದ್ದರು. ಸಚಿವೆ ಹೆಬ್ಬಾಳ್ಕರ್ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಆಪ್ತ ಸಹಾಯಕ ಸೋಮು ಅವರನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ನಡೆಸಿದರೆ ಮಾತ್ರ ಸತ್ಯ ಹೊರಬರುತ್ತದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ನೀಡಲಿ ಎಂದಿದ್ದಾರೆ.

Tags :
#BasanagoudaPatilYatnalbangalorebelagavihebbalkarlaxmi
Next Article