ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸದಾಶಿವ ಆಯೋಗ ವರದಿ ಜಾರಿಗೆ ಇಮ್ಮಡಿಶ್ರೀ ವಿರೋಧ

07:56 PM Dec 04, 2023 IST | Samyukta Karnataka

ಬಾಗಲಕೋಟೆ: ನ್ಯಾ. ಸದಾಶಿವ ಆಯೋಗದ ವರದಿ ಮರಣ ಶಾಸನವಾಗಿದ್ದು, ಅದನ್ನು ಜಾರಿಗೊಳಿಸಿದರೆ ಮುಂಬರುವ ಚುನಾವಣೆಯಲ್ಲಿ ಪೆಟ್ಟು ತಿನ್ನುವುದು ನಿಶ್ಚಿತ ಎಂದು ರಾಜ್ಯ ಸರ್ಕಾರಕ್ಕೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ಮುನ್ನೆಲೆಗೆ ಬಂದಾಗಲೆಲ್ಲ ಆಯಾ ಪಕ್ಷಗಳು ಚುನಾವಣೆಯಲ್ಲಿ ಪೆಟ್ಟು ತಿಂದಿವೆ. ಹೀಗಾಗಿ ರಾಜ್ಯ ಸರ್ಕಾರವೂ ಎಚ್ಚರಿಕೆಯ ಹೆಜ್ಜೆಯನ್ನಿಡಬೇಕೆಂದು ಹೇಳಿದರು.
ಸದಾಶಿವ ಆಯೋಗದ ವರದಿ ಮರಣಶಾಸನದಂತಿದೆ. ಜನ ಆ ವರದಿಯನ್ನು ತಿರಸ್ಕರಿಸಿದ್ದಾರೆ. ಸರ್ಕಾರವೂ ವರದಿಯನ್ನು ಪುರಸ್ಕರಿಸದೆ ತಿರಸ್ಕರಿಸಬೇಕೆಂದು ಮನವಿ ಮಾಡಿಕೊಂಡರು. ತಮ್ಮ ಪ್ರಣಾಳಿಕೆಯಲ್ಲಿ ವರದಿ ಜಾರಿ ಬಗ್ಗೆ ಹೇಳಿರುವುದಾಗಿ ಪದೇ, ಪದೆ ಹೇಳುತ್ತಿದ್ದಾರೆ. ೧೦೧ ಜಾತಿಗಳ ಹಣೆಬರಹ ಆಯೋಗದ ವರದಿಯಲ್ಲಿ ಇದೆ. ಆ ಸಮುದಾಯಗಳ ವಿಶ್ವಾಸರ್ಹತೆ ಪಡೆದು ಮುಂದಿನ ಹೆಜ್ಜೆಯನ್ನಿಡಬೇಕು ಎಂದು ಸಲಹೆ ಮಾಡಿದರು.

Next Article