For the best experience, open
https://m.samyuktakarnataka.in
on your mobile browser.

ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು

11:20 AM Mar 05, 2024 IST | Samyukta Karnataka
ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು

ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ

ಬೆಳಗಾವಿ: ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ
ಬೆಳಗಾವಿಯಲ್ಲಿ ಮಾದ್ಯಮದವರ ಜೋತೆ ಮಾತನಾಡಿರುವ ಅವರು ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಸ್ಪಷ್ಟವಾಗಿತ್ತು, ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ರು, ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ, ಇವರ ನಡೆ ಆತಂತಕ್ಕೆ ಕಾರಣವಾಗಿದೆ, ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ ಎರಡು ದಿನಗಳ ಹಿಂದೆ NIA ಎಫ್ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ, ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು ಪತ್ರಕರ್ತರನ್ನು ಗುರಿ ಮಾಡಿಕೊಂಡು ಮಾತನಾಡಿದ್ರು ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದರು.
ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ಹಾಗೂ ಅಥಣಿಯಲ್ಲು ನಾಳೆ ಸಿಎಂ ಸಿದ್ದರಾಮಯ್ಯರಿಂದ ಯೋಜನೆಗೆ ಚಾಲನೆ ವಿಚಾರವಾಗಿ ಮಾತನಾಡಿ ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ
ಸರ್ಕಾರ ಬಂದು 9 ತಿಂಗಳಾಗಿದ್ದು ನೀರಾವರಿ ಯೋಜನೆಗಳ ನಿರ್ಲಕ್ಷ್ಯ ಮಾಡಿದೆ, ಹಳೆಯ ಯೋಜನೆಗಳಿಗೆ ಮತ್ತೆ ಚಾಲನೆ ನೀಡುತ್ತಿದ್ದಾರೆ, ಅಧಿಕಾರಿಗಳು ಮಿಸ್ ಗೈಡ್ ಮಾಡುತ್ತಿದ್ದು ಸಿಎಂ ಇದನ್ನು ಪರಿಶೀಲನೆ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ನಡೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಗೆ ಇಂದು ಬಿಜೆಪಿ ರಾಷ್ಟ್ರೀಯ ‌ಅಧ್ಯಕ್ಷ ಜೆ.ಪಿ ನಡ್ಡಾ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಯ ಸಿಟು ಹಂಚಿಕೆ ಬಗ್ಗೆ ‌ಚರ್ಚೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಲ್ಲ, ದೆಹಲಿಯಲ್ಲಿ ಆಗಲಿದೆ ಇನ್ನು ತಾವು ಹಾವೇರಿಯಿಂದ ಸ್ಪರ್ಧಿಸುತ್ತಿರಾ? ಎಂಬ ಪ್ರಶ್ನೆಗೆ ನಾನು ಈಗಾಗಲೇ ಈ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು.