ಸಮುದ್ರಕ್ಕೆ ತೆರಳದಂತೆ ಸೂಚನೆ
07:05 PM Dec 02, 2024 IST | Samyukta Karnataka
ಮಂಗಳೂರು: ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ ೬ರವರೆಗೆ ಅರಬಿ ಸಮುದ್ರವು ಪ್ರಕ್ಷುಬ್ದವಾಗಿರುವ ಕಾರಣ ಅನಾಹುತ ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆವಹಿಸಲು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ವರದಿ: ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಡಿ.೩ರಂದು ಜಿಲ್ಲಾಧಿಕಾರಿ ಕೆ.ಇಂಬುಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ.