ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸರ್ಕಾರಕ್ಕೆ ರಾಜ್ಯದ ಯಾವೊಂದು ಸಮಸ್ಯೆಗಳು ಕೇಳಿಸುತ್ತಿಲ್ಲ…

12:52 PM Oct 08, 2024 IST | Samyukta Karnataka

ಬೆಂಗಳೂರು: ಸ್ವತಃ ಮುಖ್ಯಮಂತ್ರಿಗಳ ಮುಡಾ ಹರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಸೇರಿದಂತೆ ನಿರಂತರ ಭ್ರಷ್ಟಾಚಾರದಲ್ಲಿ ಮುಳುಗಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಯಾವೊಂದು ಸಮಸ್ಯೆಗಳು ಕೇಳಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದುವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮುಂದುವರಿದು ಮೂರನೇ ದಿನಕ್ಕೆ ಕಾಲಿಟ್ಟಿದ್ದು ರಾಜ್ಯ ಸರ್ಕಾರದ ಯಾರೊಬ್ಬರೂ ಈ ಸಂಬಂಧ ಸಮಸ್ಯೆ ಆಲಿಸದಿರುವುದು ದುರಾದೃಷ್ಟಕರ ಸಂಗತಿ. ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಆಡಳಿತ ಸ್ತಬ್ಧವಾಗಿದ್ದು ದಾಖಲೆಗಳ ವಿತರಣೆ, ನೀರು ಪೂರೈಕೆ ಮತ್ತು ಘನ ತ್ಯಾಜ್ಯ ವಿಲೇವಾರಿಯಲ್ಲಿ ವ್ಯತ್ಯಯ ಉಂಟಾಗಿ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾದರೂ ಸಚಿವ ಪ್ರಿಯಾಂಕ್‌ ಖರ್ಗೆ ಈ ಕುರಿತು ಸಮಸ್ಯೆ ಆಲಿಸದೇ ಇರುವುದು ಅವರ ಮಿತಿಮೀರಿದ ಬೇಜವಾಬ್ದಾರಿತನದ ಪರಮಾವಧಿ ಅಲ್ಲದೇ ಬೇರೇನೂ ಅಲ್ಲ. ಆಡಳಿತಕ್ಕೆ ಜಡ್ಡು ಹಿಡಿಸಿಕೊಂಡಿರುವ ಈ ಜನವಿರೋಧಿ ಭ್ರಷ್ಟ ಸರ್ಕಾರದ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಕಾಲ ದೂರವಿಲ್ಲ ಎಂದಿದ್ದಾರೆ.

Tags :
#ಕಾಂಗ್ರೆಸ್‌#ಬಿಜೆಪಿ#ಬೆಂಗಳೂರು
Next Article