ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
02:21 PM Nov 28, 2023 IST
|
Samyukta Karnataka
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆಯಲು ನಿರ್ಧರಿಸಿರುವ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.
Next Article