For the best experience, open
https://m.samyuktakarnataka.in
on your mobile browser.

ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ

01:16 PM Dec 04, 2023 IST | Samyukta Karnataka
ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ

ಬೆಳಗಾವಿ: ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು. ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು.
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು. ನಮ್ಮ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.