For the best experience, open
https://m.samyuktakarnataka.in
on your mobile browser.

ಎಲ್ಲಾ ಇಲಾಖೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯ

12:11 PM Aug 24, 2024 IST | Samyukta Karnataka
ಎಲ್ಲಾ ಇಲಾಖೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ ಇರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಎಲ್ಲ ಇಲಾಖೆಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಭಾಗದಲ್ಲಿರುವಂತೆ ಹಾಗೂ ಶೇ.40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ ಎಂದು ತಿಳಿಸಿದ್ದಾರೆ.

Tags :