ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸರ್ಕಾರಿ ನೌಕರರಿಗೆ ಇಂದು ಸಾಂದರ್ಭಿಕ ರಜೆ ಘೋಷಣೆ

12:07 AM Mar 19, 2024 IST | Samyukta Karnataka

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ಮಾ.೧೯ರ ಮಂಗಳವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಮಹಿಳಾ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದ್ದಾರೆ. ಈ ಸೌಲಭ್ಯವನ್ನು ಪಡೆಯಲು ನೌಕರರು ರಜೆಯನ್ನು ಮಂಜೂರು ಮಾಡುವ ಸಕ್ಷಮ ಅಧಿಕಾರಿಯಿಂದ ಮುಂಚಿತವಾಗಿ ರಜೆಯನ್ನು ಪಡೆಯತಕ್ಕದ್ದು ಹಾಗೂ ಕಾರ್ಯಕ್ರಮದಲ್ಲಿ ಹಾಜರಾಗಿರುವ ಕುರಿತು ನೌಕರರ ಸಂಘದಿಂದ ಪಡೆದ ಅಧಿಕೃತ ಹಾಜರಾತಿ ಪುಮಾಣ ಪತ್ರವನ್ನು ಸಲ್ಲಿಸಬೇಕು ಎಂಬ ಷರತ್ತನ್ನು ವಿಧಿಸಿದೆ.

Next Article