ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಹಕಾರಿ ಸಂಘಗಳ ಮೂಲಕ ಗ್ರಾಮೀಣ ಜನರ ಏಳಿಗೆ

03:25 PM Sep 28, 2024 IST | Samyukta Karnataka

ಧಾರವಾಡ ಕ್ಷೇತ್ರದಲ್ಲಿನ 192 ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳಿಗೆ ತಲಾ ರೂ. 2.65 ಲಕ್ಷ ನೀಡಲಾಗುತ್ತಿದೆ

ಹುಬ್ಬಳ್ಳಿ: ನಮ್ಮ ಸರ್ಕಾರ ಸಹಕಾರಿ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಜನರ ಏಳಿಗೆಗೆ ಸಹಕರಿಸಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ನಗರದ ಗೋಕುಲ ಗ್ರಾಮದಲ್ಲಿ ಇಂದು ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ನಿಗಮದ ನೂತನ ಶಾಖೆ ಮತ್ತು ನವೋದಯ ಸ್ವ-ಸಹಾಯ ಸಂಘಗಳ ಉದ್ಘಾಟನೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಅವರು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳ ಡಿಜಿಟಲೀಕರಣಕ್ಕೆ ದೊಡ್ಡ ಪ್ರಮಾಣದಲ್ಲಿ ಅನುದಾನಗಳನ್ನು ನೀಡಲಾಗುತ್ತಿದೆ. ಇದರ ಅನ್ವಯ ಧಾರವಾಡ ಕ್ಷೇತ್ರದಲ್ಲಿನ 192 ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳಿಗೆ ತಲಾ ರೂ. 2.65 ಲಕ್ಷ ನೀಡಲಾಗುತ್ತಿದೆ. ಸಹಕಾರಿ ಸಂಘಗಳಿಗೆ ಉಗ್ರಾಣಗಳನ್ನು ನಿರ್ಮಾಣ ಮಾಡುವುದಕ್ಕೆ ಸಾಲ ಹಾಗೂ ಸಬ್ಸಿಡಿ ಎರಡನ್ನೂ ನೀಡಲಾಗುತ್ತಿದೆ. ಜೊತೆಗೆ ಗ್ಯಾಸ್ ಸಿಲಿಂಡರ್ ವಿತರಣೆ, ಪೆಟ್ರೋಲ್ ಬಂಕ್, ಪಡಿತರ, ಗೊಬ್ಬರದ ವಿತರಣೆ ಎಲ್ಲವನ್ನು ಸಹಕಾರಿ ಸಂಘಗಳ ಮೂಲಕ ಜನರಿಗೆ ಲಭ್ಯವಾಗಿಸಲು ನಾವು ತೀರ್ಮಾನ ಮಾಡಿದ್ದೇವೆ. ನಮ್ಮ ಸರ್ಕಾರ ಸಹಕಾರಿ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಜನರ ಏಳಿಗೆಗೆ ಸಹಕರಿಸಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದಿದ್ದಾರೆ,

Tags :
#ಪ್ರಲ್ಹಾದಜೋಶಿ#ಹುಬ್ಬಳ್ಳಿ
Next Article