ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾಂಚಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿ ಕರ್ನಾಟಕದ ಪ್ರೊ. ಯಜ್ಞೇಶ್ವರ ಶಾಸ್ತ್ರಿ ನೇಮಕ

04:46 PM Jan 08, 2025 IST | Samyukta Karnataka

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕೋಸಗುಳಿಯ ಆಚಾರ್ಯ ಪ್ರೊ. ಯಜ್ಞೇಶ್ವರ ಶಾಸ್ತ್ರಿ ಅವರನ್ನು ಮಧ್ಯಪ್ರದೇಶ ಸರಕಾರ ಮುಂದಿನ ಮೂರು ವರ್ಷಗಳ ಅವಧಿಗೆ ಸಾಂಚಿ ಯುನಿವರ್ಸಿಟಿ ಆಫ್ ಬುದ್ಧಿಸ್ಟ್, ಇಂಡಿಕ್ ಸ್ಟಡೀಸ್ ಇದರ ಕುಲಾಧಿಪತಿಗಳಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಅಂತಾರಾಷ್ಟ್ರೀಯ ಖ್ಯಾತಿಯ ವಿದ್ವಾಂಸರೂ, ಶಿಕ್ಷಣ ತಜ್ಞರೂ ಆಗಿರುವ ಪ್ರೊ. ಯಜ್ಞೇಶ್ವರ ಅವರು ಈ ಹಿಂದೆ ಇದೇ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಗಮನಾರ್ಹ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಮಧ್ಯಪ್ರದೇಶ ಸರಕಾರದ ಸಂಸ್ಕೃತಿ ಸಚಿವಾಲಯದ ಆಚಾರ್ಯ ಶಂಕರ ಸಾಂಸ್ಕೃತಿಕ ಏಕ್ತಾ ನ್ಯಾಸ್‌ ಸಲಹೆಗಾರರಾಗಿ ಕೆಲಸ ನಿರ್ವಹಿಸುತ್ತಿದ್ದು ತಮ್ಮ ಅಪ್ರತಿಮ ಕೆಲಸದ ಮೂಲಕ ಜನಮನ್ನಣೆ ಗಳಿಸಿದ್ದಾರೆ.
ಪ್ರೊ. ಶಾಸ್ತ್ರಿ ಅವರು ಭಾರತೀಯ ತತ್ವಶಾಸ್ತ್ರ, ವಿಶೇಷವಾಗಿ ಹಿಂದೂ, ಬೌದ್ಧ ಮತ್ತು ಜೈನ ಫಿಲಾಸಫಿಗಳ ವಿದ್ವಾಂಸರಾಗಿ ಬಹುಶ್ರುತರಾಗಿದ್ದು ಸಂಸ್ಕೃತ ಮತ್ತು ಭಾರತೀಯ ರಿಲಿಜನ್ ವಿಷಯಗಳಿಗೆ ಸಂಬಂಧಿಸಿಯೂ ತಮ್ಮ ಸಂಶೋಧನೆಗಳು ಮತ್ತು ಉಪನ್ಯಾಸಗಳಿಗಾಗಿ ಖ್ಯಾತರಾಗಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರ ವಿಭಾಗದಲ್ಲಿ ಸಹಪ್ರಾಧ್ಯಾಪಕ, ಪ್ರೊಫೆಸರ್, ಅಧ್ಯಕ್ಷರೂ,ಆಗಿ ಸುಮಾರು ನಲವತ್ತು ವರ್ಷಗಳಿಗೂ ಅಧಿಕ ಕಾಲ ಸೇವೆಸಲ್ಲಿಸಿದ್ದಾರೆ. ಅದಲ್ಲದೇ, ಐಸಿಸಿಆರ್, ಐಸಿಪಿಆರ್ ಗಳ ನ್ಯಾಶನಲ್ ಫೆಲೊ ಹಾಗೂ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ವಿದೇಶೀ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Next Article