ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾಕು ನಾಯಿ ಕಸ ವಿಲೇ ವಾಹನಕ್ಕೆ : ಪ್ರಾಣಿ ಪ್ರಿಯರ ಆಕ್ರೋಶ..!

07:53 PM Sep 10, 2024 IST | Samyukta Karnataka

ಮಂಗಳೂರು : ಜೀವಂತ ಸಾಕು ನಾಯಿಯನ್ನು ಮನೆ ಮಾಲಿಕರು ಪಾಲಿಕೆಯ ಕಸ ವಿಲೇ ಮಾಡುವ ವಾಹನಕ್ಕೆ ಕೊಟ್ಟ ಹೇಯಾ ಕೃತ್ಯ ಬುದ್ದಿವಂತರ ನಾಡದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದಲ್ಲಿ ನಡೆದಿದೆ.
ಈ ಅಮಾನವೀಯ ಘಟನೆಗೆ ಪ್ರಾಣಿ ಪ್ರಿಯರು ಹಾಗೂ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು ತಪ್ಪಿತಸ್ತರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ನಗರದ ಡೊಂಗರಕೇರಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದ್ದು ಕೆಲ ವರ್ಷಗಳಿಂದ ಮನೆಯಲ್ಲಿ ಸಾಕಿದ್ದ ಹೆಣ್ಣು ಶ್ವಾನವನ್ನು ಮನೆಯವರು ಬಲವಂತದಿಂದ ಅಮಾನವಿಯವಾಗಿ ನಗರದ ಕಸ ವಿಲೇ ಮಾಡುವ ಪಾಲಿಕೆಯ ಲಾರಿಗೆ ಹಾಕಿ ನಗರದ ಹೊರವಲಯದ ವಾಮಾಂಜೂರು ಡಂಪಿಂಗ್ ಯಾರ್ಡ್ ಬಳಿ ಬಿಡಲಾಗಿದೆ.
ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.. ಜೊತೆಗೆ ಸಾರ್ವಜನಿಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಕ್ರೂರ ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು ಈ ಅಮಾನುಷ ಕೃತ್ಯ ಮಾಡಿದವರ ಮೇಲೆ ಕ್ರಮಕ್ಕೆ
ಆಗ್ರಹಿಸಿದ್ದಾರೆ. ಅದೇ ರೀತಿ ಪಚ್ಚನಾಡಿ ಪ್ರದೇಶದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಹುಡುಕಾಟ ಆರಮಭಿಸಿದ್ದು ಈ ಶ್ವಾನ ಕಂಡರೆ ಮಾಹಿ ನೀಡಲು ಕೋರಲಾಗಿದೆ.

Next Article