ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ: ದೂರು ದಾಖಲು
ಸುರತ್ಕಲ್, ಪಣಂಬೂರು, ಕಾವೂರು, ಬಜ್ಪೆ, ವಾಮಂಜೂರು ಠಾಣೆಗಳಲ್ಲಿ ಕಾಂಗ್ರೆಸ್ ಮುಖಂಡರಿಂದ ದೂರು ದಾಖಲು.
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವೀಡಿಯೋವನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುತ್ತಿರುವ ಮೋಹಿತ್ ಎನ್.ಎಮ್. @ಮೋಹಿತ್ ನರಸಿಂಹಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನಿರ್ದೇಶನ ಮೇರೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್, ಪಣಂಬೂರು, ಕಾವೂರು, ವಾಮಂಜೂರು, ಬಜಪೆ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದರು. ಸಮಾಜದಲ್ಲಿ ಶಾಂತಿ ಉಲ್ಲಂಘನೆಯಾಗುವುದನ್ನು ತಡೆಯುವ ಸಲುವಾಗಿ ಸದ್ರಿ ವ್ಯಕ್ತಿಯನ್ನು ದಸ್ತಗಿರಿ ಮಾಡಬೇಕಾಗಿ ಮತ್ತು ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಆಗ್ರಹ ಮಾಡಲಾಯಿತು. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕೆಪಿಸಿಸಿ ಸದಸ್ಯ ಆರ್.ಕೆ. ಪೃಥ್ವಿರಾಜ್, ಮುಖಂಡರಾದ ಪದ್ಮನಾಭ ಕೋಟ್ಯಾನ್, ಶ್ರೀನಿವಾಸ್ ಸಾಲಿಯಾನ್ ಬೋಂದೆಲ್, ಕಿಶೋರ್ ಶೆಟ್ಟಿ ಹಾಗೂ ಇನ್ನಿತರರು ನಿಯೋಗದಲ್ಲಿದ್ದರು.