ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾಮಾನ್ಯ ಕಾರ್ಯಕರ್ತರೇ ತಮಗೆ ಸ್ಟಾರ್ ಪ್ರಚಾರಕರು

02:12 PM Apr 11, 2024 IST | Samyukta Karnataka

ಶಿವಮೊಗ್ಗ: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿಯವರ ಭಾವಚಿತ್ರ ಬಳಸದಂತೆ ಹೇಳಲು ಇವರು ಯಾರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತಮಗೆ ಮೋದಿ ಫೋಟೋ ಬಳಸದಂತೆ ಹೇಳುತ್ತಿದ್ದಾರೆ. ಬಿಜೆಪಿಯವರು ಮೋದಿಯವರ ಫೋಟೋ ಬಿಟ್ಟು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಘವೇಂದ್ರ, ವಿಜಯೇಂದ್ರ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಲಿ ಎಂದು ತಿರುಗೇಟು ನೀಡಿದರು, ನಾಳೆ ಬೆಳಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಗೋಪಿ ವೃತ್ತಕ್ಕೆ ಬಂದು ಸಭೆ ನಡೆಸಲಾಗುವುದು. ನಂತರ ನಾಮಪತ್ರ ಸಲ್ಲಿಸಲಾಗುವುದು. ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ಕಡೆಗಳಿಂದ ರಾಷ್ಟ್ರಭಕ್ತರು ಬರಲಿದ್ದಾರೆ ಎಂದರು. ಸಾಮಾನ್ಯ ಕಾರ್ಯಕರ್ತ ಮತದಾರರೇ ತಮಗೆ ಸ್ಟಾರ್ ಪ್ರಚಾರಕರು. ಬಿಜೆಪಿ ಶುದ್ಧೀಕರಣ ಆಗಬೇಕಾಗಿದ್ದು, ಅದಕ್ಕಾಗಿಯೇ ಹೊರಗೆ ಹೋರಾಟ ಮಾಡುತ್ತಿದ್ದೇನೆ ಎಂದರು.ತಮ್ಮ ಅಭಿಮಾನಿಗಳು ನಿರೀಕ್ಷೆ ಮೀರಿ ಕೆಲಸ ಮಾಡುತ್ತಿದ್ದಾರೆ. ಸೋಲಿನ ಭಯದಲ್ಲಿ ಅಪ್ರಚಾರ ಮಾಡಲಾಗುತ್ತಿದೆ. ಆದರೆ ಅಪ್ರಚಾರಕ್ಕೆ ಕಾರ್ಯಕರ್ತರು ಕಿವಿಗೊಡಬಾರದು. ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

Next Article