ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾಹಿತ್ಯ ಸಮ್ಮೇಳನ ವೇದಿಕೆಗೆ ಭೂಮಿ ಪೂಜೆ

10:08 PM Nov 22, 2024 IST | Samyukta Karnataka

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-೨೦೨೪ರ ಸಂಬಂಧ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ಭೂಮಿ ಪೂಜೆಯನ್ನು ನೆರವೇರಿಸಿದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ. ೨೦, ೨೧ ಹಾಗೂ ೨೨ರಂದು ೩ ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿದೆ ಎಂದು ಈಗಾಗಲೇ ತೀರ್ಮಾನವಾಗಿದೆ. ಸಮ್ಮೇಳನಕ್ಕೆ ಕೇವಲ ಒಂದು ತಿಂಗಳು ಬಾಕಿ ಇದೆ. ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆಯು ಯಾವುದೇ ವಿಘ್ನಗಳಿಲ್ಲದೆ ನೆರವೇರಿದ್ದು, ಇಂದಿನಿಂದ ವೇದಿಕೆ ನಿರ್ಮಾಣದ ಚಟುವಟಿಕೆಗಳು ಪ್ರಾರಂಭವಾಗಲಿದೆ ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿರುವ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿರುವುದು ಬಹಳ ಸಂತೋಷದ ವಿಷಯವಾಗಿದೆ. ಅವರಿಗೆ ಕೇಂದ್ರ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಮಂಡ್ಯ ಜಿಲ್ಲೆಯ ಪರವಾಗಿ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದರು.
ರಾಜ್ಯದ ವಿವಿಧ ಭಾಗಗಳಿಂದ ಎಲ್ಲಾ ಸಾಹಿತಿಗಳು, ಕನ್ನಡಾಭಿಮಾನಿಗಳು, ಕನ್ನಡ ಪರ ಹೋರಾಟಗಾರರು, ಕನ್ನಡ ಸಂಘಟನೆಗಳು ಹಾಗೂ ಅನೇಕ ಗಣ್ಯರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ. ಸಮ್ಮೇಳನದ ಜವಾಬ್ದಾರಿಯು ಕೇಂದ್ರ ಸಾಹಿತ್ಯ ಪರಿಷತ್ತು, ಜಿಲ್ಲಾ ಸಾಹಿತ್ಯ ಪರಿಷತ್ತು, ಸರ್ಕಾರ, ಜಿಲ್ಲಾಡಳಿತ, ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಮೇಲಿದ್ದು, ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

Next Article